ಹೊಸ ಅಪ್​ಡೇಟ್​ ನೀಡಿದ ರಶ್ಮಿಕಾ ಮಂದಣ್ಣ

ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಜೋಡಿಯ ಪುಷ್ಪ ಸಿನಿಮಾ ಬಿಡುಗಡೆಯಾಗಿ ಗಲ್ಲಾಪೆಟ್ಟಿಗೆಯಲ್ಲಿ ಯಶಸ್ಸು ಕಂಡಿದ್ದು, ಇದೀಗ ಪುಷ್ಪ 2 ಕೂಡಾ ಶೀಘ್ರದಲ್ಲಿಯೇ ಸೆಟ್ಟೇರಲಿದೆ ಎಂದು ನಟಿ ರಶ್ಮಿಕಾ ಬಹಿರಂಗಗೊಳಿಸಿದ್ದಾರೆ.

ಇಂಡಿಯಾ ಟುಡೇ ಜತೆಗಿನ ವಿಶೇಷ ಸಂದರ್ಶನದಲ್ಲಿ ರಶ್ಮಿಕಾ ಈ ವಿಚಾರವನ್ನು ಹಂಚಿಕೊಂಡಿದ್ದು, ಮಾರ್ಚ್ ನಲ್ಲಿ The Rule (pushpa-2) ಚಿತ್ರೀಕರಣ ಆರಂಭವಾಗಲಿದೆಯಂತೆ.

ಪುಷ್ಪ ಭಾಗ -2 ಈ ವರ್ಷದ ಡಿಸೆಂಬರ್ ನಲ್ಲಿ ಬಿಡುಗಡೆಯಾಗಲಿದೆ. ಅಲ್ಲದೇ ಪುಷ್ಪ2 ಸಿನಿಮಾ ಚಿತ್ರೀಕರಣದಲ್ಲಿ ಪಾಲ್ಗೊಳ್ಳುವುದನ್ನು ಕಾತುರದಿಂದ ಕಾಯುತ್ತಿರುವುದಾಗಿ ರಶ್ಮಿಕಾ ತಿಳಿಸಿದ್ದಾರೆ.

ಪುಷ್ಪ ಸಿನಿಮಾ 2021ರ ಡಿಸೆಂಬರ್ 21ರಂದು ಬಿಡುಗಡೆಯಾಗಿತ್ತು. ಅಲ್ಲು ಅರ್ಜುನ್ ಅಭಿನಯದ ಪುಷ್ಪ ಸಿನಿಮಾಕ್ಕೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಪುಷ್ಪ ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಕಳೆದ ವರ್ಷ ಮೇನಲ್ಲಿ ಘೋಷಿಸಿತ್ತು.

ಪುಷ್ಪ ಸಿನಿಮಾದ ಮೊದಲ ಭಾಗವನ್ನು 2021ರಲ್ಲಿ ಹಾಗೂ ಎರಡನೇ ಭಾಗವನ್ನು 2022ರಲ್ಲಿ ಬಿಡುಗಡೆ ಮಾಡುವುದಾಗಿ ತಿಳಿಸಿತ್ತು. ಈಗಾಗಲೇ ಪುಷ್ಪ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಗಳಿಸಿದೆ. ಅಲ್ಲು ಅರ್ಜುನ್ ಅಭಿನಯದ ಪುಷ್ಪ ಸಿನಿಮಾ ಐದು ಭಾಷೆಗಳಲ್ಲಿ ತೆರೆಕಂಡಿತ್ತು. ಈ ಸಿನಿಮಾವನ್ನು ಸುಕುಮಾರ್ ನಿರ್ದೇಶಿಸಿದ್ದರು.

 

Related ಸುದ್ದಿ