BA.2.12 ಹೊಸ ರೂಪಾಂತರಿ ವೈರಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ 4ನೇ ಅಲೆ ಭೀತಿ ಎದುರಾಗಿದ್ದು, ಈ ಮಧ್ಯೆ BA.2.12 ಹೊಸ ರೂಪಾಂತರಿ ವೈರಸ್ ಪತ್ತೆಯಾಗಿದೆ. ಹೊಸ ರೂಪಾಂತರಿ ವೈರಸ್ ಪತ್ತೆ ಹಿನ್ನೆಲೆಯಲ್ಲಿ INSACOG ಲ್ಯಾಬ್ ನಿಂದ ಕೇಂದ್ರ ಸರ್ಕಾರಕ್ಕೆ ವರದಿ ರವಾನೆಯಾಗಿದೆ. ಹೊಸ ತಳಿ ಒಮಿಕ್ರಾನ್ ಉಪತಳಿ BA.2.10 ಗುಣಲಕ್ಷಣಗಳನ್ನು ಹೊಂದಿದೆ.

ಲ್ಯಾಬ್ ಗಳಲ್ಲಿ ರೂಪಾಂತರಿ ತಳಿ ಪತ್ತೆಯಾಗಿದ್ದು, ಈ ತಳಿಗಳು BA.2.10, BA.2.12,XE ತಳಿಯೇ ಎಂಬ ಬಗ್ಗೆ ಸಂಶೋಧನೆ ನಡೆಯುತ್ತಿದೆ ಎಂದು ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ತಿಳಿಸಿದ್ದಾರೆ.

ಮುಂಬೈ, ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ರಾಜ್ಯದಲ್ಲಿಯೂ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಉಪತಳಿಗಳಿಂದಲೇ ಸೋಂಕು ಹೆಚ್ಚುವ ಸಾಧ್ಯತೆ ಇದ್ದು, ಟೆಸ್ಟ್, ಟ್ರ್ಯಾಕ್, ಟ್ರೀಟ್ ಫಾರ್ಮುಲಾದಂತೆ ಕ್ರಮ ವಹಿಸಲು ಆರೋಗ್ಯ ಇಲಾಖೆ ಸಜ್ಜಾಗಿದೆ.