ಕೋವಿಡ್ ನಿಂದ ಮೃತಪಟ್ಟವರ ಕುಟುಂಬಗಳಿಗೆ 1 ಲಕ್ಷ ರೂ ಪರಿಹಾರ: ಸಿಎಂ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಕೋವಿಡ್ -19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ಒಂದು ಲಕ್ಷ ರೂ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿದ ಅವರು, ಕೋವಿಡ್ ನಿಂದ ಮೃತಪಟ್ಟವರ ಕುಟುಂಬಗಳು ಸಂಕಷ್ಟಕ್ಕೀಡಾಗಿವೆ. ಹೀಗಾಗಿ ಬಿಪಿಎಲ್ ಕುಟುಂಬಗಳಿಗೆ ಒಂದು ಲಕ್ಷ ರೂ ಪರಿಹಾರ ನೀಡಲು ನಿರ್ಧರಿಸಿದ್ದೇವೆ ಎಂದರು.

ಬಿಪಿಎಲ್ ಕುಟುಂಬ ಗಳಲ್ಲಿ ಕೋವಿಡ್ ಸೋಂಕಿನಿಂದ ವಯಸ್ಕರು ಮೃತ ಪಟ್ಟಿದ್ದರೆ ಒಂದು ಕುಟುಂಬಕ್ಕೆ ಒಬ್ಬರಂತೆ ಒಂದು ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ರಾಜ್ಯದ ಹಣಕಾಸಿನ ಪರಿಸ್ಥಿತಿ ಇರೋದರಲ್ಲಿ ಉತ್ತಮವಾಗಿದೆ. ಇದಕ್ಕಾಗಿ ಸುಮಾರು 250-300ಕೋ ಖರ್ಚಾಗುತ್ತದೆ. ಈಗಾಗಲೇ ಸುಮಾರು 25 ಸಾವಿರ ಬಿಪಿಎಲ್ ಕುಟುಂಬದ ಕೆಲವರು ಮೃತ ಪಟ್ಡಿದ್ದಾರೆ. ಬಿಪಿಎಲ್ ಕಾರ್ಡ್ ಹೊಂದಿರುವ ವಯಸ್ಕರು ಮೃತಪಟ್ಟಿರುವ ಕುಟುಂಬಕ್ಕೆ ಒಂದು ಲಕ್ಷ ಪರಿಹಾರ ಒಂದು ಕುಟುಂಬದ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುತ್ತದೆ ಎಂದರು.