ಒಂದು ದಿನದ ನವಜಾತ ಶಿಶುವಿಗೆ ಕೊರೊನಾ!

ಗದಗ: ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲೂ ಮಕ್ಕಳಿಗೆ ಸೋಂಕು ತಗಲುತ್ತಿರೋ ಸಂಖ್ಯೆ ಹೆಚ್ಚಿವೆ. ಇಂದು ಹುಟ್ಟಿದ ಒಂದು ದಿನದ ನವಜಾತ ಶಿಸು ಸೇರಿದಂತೆ 87 ಮಕ್ಕಳಿಗೆ ಕೊರೋನಾ ಸೋಂಕು  ದೃಢಪಟ್ಟಿದೆ. ಈ ಬಗ್ಗೆ ಮಾಹಿತಿ ನೀಡಿರುವಂತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ್ ಅವರು, ಜಿಲ್ಲೆಯಲ್ಲಿ ಹುಟ್ಟಿದ ಒಂದು ದಿನದ ಮಗುವಿಗೆ ಕೊರೋನಾ ಸೋಂಕು ತಗುಲಿದೆ. ತಾಯಿಗೆ ನೆಗೆಟಿವ್ ಆಗಿದ್ದು, ಮಗುವನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದಲ್ಲದೇ 4 ವರ್ಷದ ಮಗು, 11 ವರ್ಷದ ಮಗು ಸೇರಿದಂತೆ 84 ಮಕ್ಕಳಿಗೆ ಕೊರೋನಾ ಸೋಂಕು ತಗುಲಿರೋದಾಗಿ ತಿಳಿಸಿದರು.ಜಿಲ್ಲೆಯಲ್ಲಿ ಗರ್ಭಿಣಿಯರಿಗೂ ಕೊರೋನಾ ಸೋಂಕು ತಗುಲಿದೆ. ಗದಗದ ಇಬ್ಬರು, ರೋಣದ ಮತ್ತಿಬ್ಬರು ಸೇರಿದಂತೆ ನಾಲ್ವರಿಗೆ ಪಾಸಿಟಿವ್  ಪತ್ತೆಯಾಗಿದೆ. ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದ್ದು, ಯಾವುದೇ ಆತಂಕವಿಲ್ಲ. ಶೇ.95ರಷ್ಟು ಸೋಂಕಿತರು ಹೋಂ ಐಸೋಲೇಷನ್ ನಲ್ಲಿಯೇ ಚಿಕಿತ್ಸೆ ಪಡೆದು ಗುಣಮುಖರಾಗುತ್ತಿರೋದಾಗಿ ಹೇಳಿದರು.