ರಾಜ್ಯದಲ್ಲಿ ಕೋವಿಡ್ ಮೆಗಾ ಬ್ಲಾಸ್ಟ್

ಬೆಂಗಳೂರು: ರಾಜ್ಯದಲ್ಲಿ ಇಂದು 25 ಸಾವಿರಕ್ಕೂ ಅಧಿಕ ಮಂದಿಗೆ ಕೊರೋನಾ ಸೋಂಕು ತಗುಲಿದೆ. ರಾಜಧಾನಿ ಬೆಂಗಳೂರಿನಲ್ಲಿ 18 ಸಾವಿರಕ್ಕೂ ಅಧಿಕ ಮಂದಿಗೆ ಪಾಸಿಟಿವ್ ವರದಿ ಬಂದಿದೆ.

ರಾಜ್ಯದಲ್ಲಿ ಇವತ್ತು ಕೊರೋನಾ ಮಹಾಸ್ಪೋಟವಾಗಿದ್ದು 25,005 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಪಾಸಿಟಿವಿಟಿ ದರ ಶೇಕಡ 12.39 ರಷ್ಟು ಏರಿಕೆಯಾಗಿದೆ.

ಇವತ್ತು 2363 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,15,733 ಕ್ಕೆ ಏರಿಕೆಯಾಗಿದೆ. ಇವತ್ತು 8 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 2,01,704 ಪರೀಕ್ಷೆ ನಡೆಸಲಾಗಿದೆ.

ಬೆಂಗಳೂರಿನಲ್ಲಿ 18,374 ಜನರಿಗೆ ಸೋಂಕು ತಗುಲಿದ್ದು, 91 ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿವೆ. ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ.