ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಹೊಸ ಗೈಡ್​​​ಲೈನ್ಸ್ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ನಿಧಾನವಾಗಿ ಕೋವಿಡ್ ಪ್ರಕರಣಗಳು ಏರಿಕೆ ಆಗುತ್ತಿರುವ ಬೆನ್ನಲ್ಲೇ ಆರೋಗ್ಯ ಇಲಾಖೆಯು ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ನೂತನ ಮಾರ್ಗಸೂಚಿ ಬಿಡುಗಡೆ ಮಾಡಿದೆ. ದಕ್ಷಿಣ ಕೊರಿಯಾ, ಜಪಾನ್, ಥೈಲ್ಯಾಂಡ್, ಆಸ್ಟ್ರೇಲಿಯಾ, ವಿಯೆಟ್ನಾಂ, ನ್ಯೂಜಿಲೆಂಡ್​​ನಲ್ಲಿ ಪಾಸಿಟಿವ್​ ಪ್ರಕರಣ ಹೆಚ್ಚಳವಾಗುತ್ತಿರುವುದು ವರದಿಯಾಗಿದೆ.

ಪ್ರಮುಖವಾಗಿ ಬೆಂಗಳೂರಿಗೆ ನೇರ ವಿಮಾನ ಸಂಪರ್ಕ ಹೊಂದಿರುವ ಹಿನ್ನೆಲೆಯಲ್ಲಿ ಜಪಾನ್ ಹಾಗೂ ಥೈಲ್ಯಾಂಡ್​ನಿಂದ ಬರುವ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಗೈಡ್​ಲೈನ್ಸ್​ ಪಾಲನೆ ಕಡ್ಡಾಯವಾಗಿದೆ.

  • ಹೊಸ ರೂಲ್ಸ್ ಏನು?
  1. ಜಪಾನ್‌, ಥೈಲ್ಯಾಂಡ್​ನಿಂದ ಬರುವವರಿಗೆ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ
  2. ಕೋವಿಡ್ ಲಕ್ಷಣಗಳಿರುವ ಪ್ರಯಾಣಿಕರ ಸ್ಯಾಂಪಲ್ ವಿಮಾನ ನಿಲ್ದಾಣದ ಲ್ಯಾಬ್​​ನಲ್ಲೇ ಪರೀಕ್ಷೆ ಮಾಡುವುದು. ಪಾಸಿಟಿವ್ ಬಂದರೆ ಜೀನೋಮ್ ಸೀಕ್ವೆನ್ಸಿಂಗ್ ಕಳಿಸುವುದು
  3. ಜಪಾನ್, ಥೈಲ್ಯಾಂಡ್​ನಿಂದ ಬರುವ ಪ್ರಯಾಣಿಕರಿಗೆ 14 ದಿನಗಳ ಕಾಲ ಟೆಲಿ ಮಾನಿಟರಿಂಗ್ ಮಾಡುವುದು ಕಡ್ಡಾಯ