ಶಾಲೆಗೆ ಹೋಗುತ್ತಿದ್ದ ಬಾಲಕಿ ಕರೆದೊಯ್ದು ಅತ್ಯಾಚಾರ

ಶಿವಮೊಗ್ಗ ಜಿಲ್ಲೆ ಭದ್ರಾವತಿ ಪೇಪರ್ ಟೌನ್ ಠಾಣೆ ಪೊಲೀಸರು ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ಬಂಧಿಸಿದ್ದಾರೆ. ಶಿವಮೊಗ್ಗ ತಾಲೂಕಿನ ನಿಧಿಗೆ ಗ್ರಾಮದ ಉಮೇಶ್(28) ಬಂಧಿತ ಆರೋಪಿ ಎಂದು ಹೇಳಲಾಗಿದೆ. ಭದ್ರಾವತಿ ತಾಲೂಕಿನ ಮಸರಹಳ್ಳಿ ಗ್ರಾಮದ 14 ವರ್ಷದ ಬಾಲಕಿ ಸೋಮವಾರ ಶಾಲೆಗೆ ತೆರಳುತ್ತಿದ್ದ ವೇಳೆಯಲ್ಲಿ ಅಪರಿಚಿತ ವ್ಯಕ್ತಿ ವಾಹನದಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿರುವುದಾಗಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.