ಬೆಂಗಳೂರು ಸೇರಿದಂತೆ ರಾಜ್ಯದ ಪಿಯು ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ -ಪದವಿ ಪೂರ್ವ ಶಿಕ್ಷಣ ಮಂಡಳಿ

ಬೆಂಗಳೂರು :ಬೆಂಗಳೂರು ಸೇರಿದಂತೆ ರಾಜ್ಯದ ಪಿಯು ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿ ಪಿಯು ಬೋರ್ಡ್ ಆದೇಶಿಸಿದೆ. ಈ ಕುರಿತಂತೆ ಸುಮಾರು 128 ಪುಟಗಳ ಮಾರ್ಗಸೂಚಿಯನ್ನು ಹೊರಡಿಸಿರುವಂತ ಪದವಿ ಪೂರ್ವ ಶಿಕ್ಷಣ ಮಂಡಳಿಯು, ಪಿಯು ಪಠ್ಯಕ್ರಮದ ಬೋಧನೆಯನ್ನು ಹೊರತುಪಡಿಸಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಇರುವ ಪಠ್ಯಕ್ರಮದ ಬಗ್ಗೆ ಬೋಧನೆ ಮಾಡುವುದು ಕಂಡು ಬಂದಲ್ಲಿ, ಸದರಿ ಸಂಸ್ಥೆಗಳ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು. ಇದಷ್ಟೇ ಅಲ್ಲದೇ ಸುಪ್ರೀಂ ಕೋರ್ಟ್ ಆದೇಶದ ಹಿನ್ನಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖಾ ವ್ಯಾಪ್ತಿಯಲ್ಲಿನ ಕಾಲೇಜುಗಳಲ್ಲಿ ಆಯಾ ಕಾಲೇಜು ಅಭಿವೃದ್ಧಿ ಸಮಿತಿಯು ನಿರ್ಧರಿಸಿರುವಂತ ಸಮವಸ್ತ್ರಗಳನ್ನು ಧರಿಸತಕ್ಕದ್ದು. ಆಡಳಿತ ಮಂಡಳಿಗಳು, ಸಿಡಿಸಿ ಸಮವಸ್ತ್ರವನ್ನು ನಿಗದಿಪಡಿಸದೇ ಇದ್ದಲ್ಲಿ, ಸಮಾನತೆ ಮತ್ತು ಐಕ್ಯತೆಯನ್ನು ಕಾಪಾಡಿಕೊಂಡು ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದಂತೆ ಇರುವ ಉಡುಪುಗಳನ್ನು ಧರಿಸುವಂತೆ ತಿಳಿಸಿದೆ.

Related ಸುದ್ದಿ