ಪ್ರಾರ್ಥನೆಯ ವೇಳೆ ‌ʼಅಫ್ಘಾನ್ ಮಸೀದಿʼಯಲ್ಲಿ ಬಾಂಬ್ ಸ್ಫೋಟ

ಪೂರ್ವ ಆಫ್ಘಾನಿಸ್ತಾನದ ನಂಗರ್ಹಾರ್ ಪ್ರಾಂತ್ಯದ ಸ್ಪಿನ್ ಘರ್ ಪ್ರದೇಶದ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಯ ವೇಳೆ ಬಾಂಬ್ ಸ್ಫೋಟ ಸಂಭವಿಸಿದ್ದು, ಸ್ಥಳೀಯ ಮುಲ್ಲಾ ಸೇರಿದಂತೆ ಕನಿಷ್ಠ 12‌ ಜನರು ಗಾಯಗೊಂಡಿದ್ದಾರೆ ಎಂದು ಪ್ರದೇಶದ ನಿವಾಸಿಗಳು ತಿಳಿಸಿದ್ದಾರೆ.

ಇನ್ನು ಮಧ್ಯಾಹ್ನ 1:30ರ ಸುಮಾರಿಗೆ ಮಸೀದಿಯ ಒಳಭಾಗದಲ್ಲಿ ಸ್ಫೋಟ ಸಂಭವಿಸಿದೆ ಎಂದು ಸ್ಥಳೀಯ ನಿವಾಸಿ ಅಟಲ್ ಶಿನ್ವಾರಿ ತಿಳಿಸಿದ್ದಾರೆ.

ಇನ್ನು ಈ ಸ್ಟೋಟದ ಹೆಚ್ಚಿನ ಮಾಹಿತಿ ಲಭಿಸಬೇಕಿದೆ.