ಶತಕ ಬಾರಿಸಿದ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯವಿಲ್ಲ ಎಂದ ಧರ್ಮೇಂದ್ರ ಪ್ರಧಾನ್

ಜೈಪುರ್: ಪೆಟ್ರೋಲ್ ಮತ್ತು ಡೀಸೆಲ್ ದರ ಶತಕ ಬಾರಿಸಿ ಮುನ್ನುಗ್ಗುತ್ತಿದ್ದು, ಜನಸಾಮಾನ್ಯರು ಕಂಗಾಲಾಗಿ ಹೋಗಿದ್ದಾರೆ. ದಿನೇ ದಿನೇ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಿಂದ ಕಂಗಾಲಾಗಿರುವ ಗ್ರಾಹಕರು ಬೆಲೆ ಇಳಿಕೆ ನಿರೀಕ್ಷೆಯಲ್ಲಿದ್ದರು. ಆದರೆ, ಸದ್ಯದಲ್ಲಿ ಇಳಿಕೆ ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಿಂದ ಜನ ಸಮಸ್ಯೆ ಅನುಭವಿಸುತ್ತಿದ್ದಾರೆ ಎನ್ನುವುದು ಗಮನದಲ್ಲಿ ಇದ್ದರೂ, ಸದ್ಯಕ್ಕೆ ಬೆಲೆ ಇಳಿಕೆ ಮಾಡುವ ಸ್ಥಿತಿಯಲ್ಲಿ ಸರ್ಕಾರ ಇಲ್ಲ. ತೆರಿಗೆ ಹಣ ಕಲ್ಯಾಣ ಯೋಜನೆಗೆ ಬಳಕೆಯಾಗುತ್ತಿದೆ ಎಂದು ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ

ಜೈಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಧನ ದರ ಏರಿಕೆ ಜನರ ಮೇಲೆ ನೇರ ಪರಿಣಾಮ ಬೀರುತ್ತಿದೆ. ಕೋವಿಡ್ ಸಂದರ್ಭದಲ್ಲಿ ಜನಕಲ್ಯಾಣ ಯೋಜನೆಗಳಿಗೆ ಸರ್ಕಾರಕ್ಕೆ ಸಂಪನ್ಮೂಲದ ಅಗತ್ಯವಿದೆ. ಹೀಗಾಗಿ ಸದ್ಯಕ್ಕೆ ಇಂಧನ ದರ ಇಳಿಕೆ ಮಾಡಲಾಗುವುದಿಲ್ಲವೆಂದು ಹೇಳಿದ್ದಾರೆ.