ರಾಜ್ಯದ 5-10 ನೇ ತರಗತಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ 5 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಬದಲು ಆನ್ ಲೈನ್ ಮತ್ತು ಆಫ್ ಲೈನ್ ನಲ್ಲಿ ಪಠ್ಯ ಬೋಧನೆಗೆ ಮಾರ್ಗಸೂಚಿ ಪ್ರಕಟಿಸಿದೆ.

ದೂರದರ್ಶನ ಚಂದನ ವಾಹಿನಿಯಲ್ಲಿ ಸಂವೇದಾ ಕಾರ್ಯಕ್ರಮದ ಮೂಲಕ 1662 ವಿಡಿಯೋ ಪಾಠ ಬೋಧನಾ ನಡೆಯಲಿದೆ. ಮತ್ತು ಎಫ್‌ಎಂ ರೇಡಿಯೋದಲ್ಲಿ ಆಡಿಯೋ ಪಾಠಗಳ ಪ್ರಸಾರ ನಡೆಯಲಿದೆ. ಕೇಂದ್ರ ಸರ್ಕಾರದ ದೀಕ್ಷಾ ಆಯಪ್ ನಲ್ಲಿ 1 ರಿಂದ 10 ನೇ ತರಗತಿ ಮಕ್ಕಳ ಪಠ್ಯಕ್ಕೆ ಸಂಬಂಧಿಸಿದಂತೆ 22 ಸಾವಿರಕ್ಕೂ ಹೆಚ್ಚು ಕಂಟೆಂಟ್ ಗಳನ್ನು ಅಪ್ ಲೋಡ್ ಮಾಡಲಾಗಿದೆ.

ತರಗತಿವಾರು ಮಕ್ಕಳ ಪೋಷಕರ ವಾಟ್ಸಪ್ ಗುಂಪುಗಳನ್ನು ಮಾಡಿ, ಅವರನ್ನು ನಿಗದಿತವಾಗಿ ಸಂಪರ್ಕಿಸಿ ಮಕ್ಕಳ ಕಲಿಕೆಗೆ ಮಾರ್ಗದರ್ಶನ ನೀಡಬೇಕು. ದೂರದರ್ಶನ ರೇಡಿಯೋ ಪಾಠ ಬೋಧನಾ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಇಲಾಖೆ ತಿಳಿಸಿದೆ.