ಆಸಿಡ್ ದಾಳಿ: ಯುವತಿಗೆ 1 ಲಕ್ಷ ರೂ. ಪರಿಹಾರ ಘೋಷಿಸಿದ ಮುರುಗೇಶ್ ನಿರಾಣಿ

ಬೆಂಗಳೂರು: ದುಷ್ಟರ್ಮಿಯೊಬ್ಬನಿಂದ ಆಸಿಡ್ ದಾಳಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ಥೆ ‌ಯುವತಿಯ ವೈದ್ಯಕೀಯ ವೆಚ್ಚಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ವೈಯಕ್ತಿಕವಾಗಿ 1ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ.

ಮೊದಲ ಹಂತದಲ್ಲಿ ಯುವತಿಯ ವೈದ್ಯಕೀಯ ವೆಚ್ಚಕ್ಕೆ 1 ಲಕ್ಷ ‌ ಪರಿಹಾರವನ್ನು ವೈಯಕ್ತಿಕವಾಗಿ ನೀಡಲಾಗುವುದು. ಅಗತ್ಯವಿದ್ದರೆ ಮುಂದಿನ ದಿನಗಳಲ್ಲಿ ಅವರ ಕುಟುಂಬ ವರ್ಗದವರಿಗೆ ಆರ್ಥಿಕ ನೆರವು ನೀಡುವ ಆಶ್ವಾಸನೆಯನ್ನು ನಿರಾಣಿ ಅವರು ನೀಡಿದ್ದಾರೆ.

ಆಸಿಡ್ ದಾಳಿಗೆ ಒಳಗಾದ ಯುವತಿಯ ಕುಟುಂಬದವರು ಆರ್ಥಿಕವಾಗಿ ತುಂಬಾ ಸಂಕಷ್ಟದಲ್ಲಿದ್ದಾರೆ ಎಂಬುದನ್ನು ತಿಳಿದು ತುಂಬಾ ಬೇಸರವಾಯಿತು. ಹೀಗಾಗಿ ವೈದ್ಯಕೀಯ ನೆರವಿಗೆ ವೈಯುಕ್ತಿಕವಾಗಿ ನೆರವು ನೀಡುತ್ತಿದ್ದೇನೆಂದು ಹೇಳಿದ್ದಾರೆ.

ಅತಿ ಶೀಘ್ರದಲ್ಲೇ ಕುಟುಂಬದವರಿಗೆ ಚಕ್ ನೀಡಲಾಗುವುದು. ಸರ್ಕಾರದಿಂದಲೂ ನೆರವು ಕೊಡಿಸಲು ಎಲ್ಲಾ ‌ರೀತಿಯಲ್ಲೂ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಆಶ್ವಾಸನೆ ನೀಡಿದ್ದಾರೆ.

Related ಸುದ್ದಿ