ಚುನಾವಣೆ ಹಿನ್ನೆಲೆಯಲ್ಲೇ ಪಂಜಾಬ್ ಸಿಎಂ ಸಂಬಂಧಿಗಳ ಮನೆ ಮೇಲೆ ಇ.ಡಿ ದಾಳಿ

ಲೂಧಿಯಾನ(ಪಂಜಾಬ್): ವಿಧಾನಸಭಾ ಚುನಾವಣೆ ಕಣ ಪಂಜಾಬ್ನಲ್ಲಿ ರಂಗೇರುತ್ತಿದೆ. ಮತ್ತೊಂದೆಡೆ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಪಂಜಾಬ್ ಸಿಎಂ ಚರಣ್ಜಿತ್ ಸಿಂಗ್ ಚನ್ನಿ ಅವರ ಸಂಬಂಧಿಗಳ ನಿವಾಸದ ಮೇಲೆ ದಾಳಿ ನಡೆಸಿರುವ ಕೇಂದ್ರ ತನಿಖಾ ಸಂಸ್ಥೆಯಾದ ಜಾರಿ ನಿರ್ದೇಶನಾಲಯ ಕೋಟ್ಯಂತರ ರೂಪಾಯಿ ನಗದು ವಶಕ್ಕೆ ಪಡೆದಿದೆ.
ಮೂಲಗಳ ಪ್ರಕಾರ ಲೂದಿಯಾನದಲ್ಲಿರುವ ಚನ್ನಿ ಸಂಬಂಧಿಕರ ಮನೆಯ ಮೇಲೆ ದಾಳಿ ನಡೆಸಲಾಗಿದ್ದು, 6 ಕೋಟಿ ರೂಪಾಯಿಗೂ ಹೆಚ್ಚು ನಗದು ಪತ್ತೆಯಾಗಿದೆ. 2018ರಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿತ್ತು. ಈಗ ಅಕ್ರಮ ಗಣಿಗಾರಿಕೆ ನಿಲ್ಲಿಸಿದ್ದರೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಮುಂಬರುವ ವಿಧಾನಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಸಿಎಂ ಚರಣ್ಜಿತ್ ಸಿಂಗ್ ಚನ್ನಿ ಅವರನ್ನು ಗುರಿಯಾಗಿಸಿಕೊಂಡು ಈ ರೀತಿಯಾಗಿ ಒತ್ತಡ ಹೇರಲು ಯತ್ನಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿಂದೆ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ವೇಳೆಯೂ ಟಿಎಂಸಿ ಅಭ್ಯರ್ಥಿಗಳ ಮನೆ ಮೇಲೆ ಕೇಂದ್ರ ತನಿಖಾ ಸಂಸ್ಥೆಗಳು ದಾಳಿ ನಡೆಸಿದ್ದವು.
ಟ್ರೆಂಡಿಂಗ್ ಸುದ್ದಿ
- ವೀಕ್ಷಕರಿಗೆ ಧನ್ಯವಾದಗಳು – ಸಹಕಾರ ಹೀಗೆ ಇರಲಿ ಎಂದು ಬಯಸುವ ದಿ ನ್ಯೂಸ್24 ಕನ್ನಡ.
- ಸರ್ಕಾರಿ ಸವಲತ್ತುಗಳನ್ನು ಬಳಸಿಕೊಳ್ಳಲು ಜನರು ಹಿಂದೆಬಿದ್ದಿದ್ದಾರೆ
- ಮಾಜಿ ಸಿಎಂ ಎಸ್.ಎಂ.ಕೃಷ್ಣ ಸಹೋದರ ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ಎಂ.ಶಂಕರ್ ವಿಧಿವಶ
- ಡಾ.ಕೆ ಸುಧಾಕರ್ ಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ..!
- ಆಪರೇಷನ್ ಕಮಲಕ್ಕೆ ಬಿಜೆಪಿ ವರಿಷ್ಠರಿಂದ ಗ್ರೀನ್ ಸಿಗ್ನಲ್..!
- ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಎಚ್.ವಿಶ್ವನಾಥ್..!
- ಮದುವೆಗೆ ಬಂದವರಿಗೆ ಉಚಿತ ಎಣ್ಣೆ ವ್ಯವಸ್ಥೆ..!
- ಜೀವನದಲ್ಲಿ ನಿಮ್ಮ ಹತ್ತಿರ ಕ್ಯಾನ್ಸರ್ ಖಾಯಿಲೆ ಬಾರದೆಂದರೆ ಹೀಗೆ ಮಾಡಿ..!
