ಗಾಂಧಿ ಹೆಸರಿಟ್ಟುಕೊಂಡ ಮಾತ್ರಕ್ಕೆ ಅವರೆಲ್ಲಾ ಗಾಂಧಿಗಳೇ?: ರಾಜ್ಯ ಬಿಜೆಪಿ ಟ್ವೀಟ್

ಬೆಂಗಳೂರು : ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಇ.ಡಿ ವಿಚಾರಣೆ ವಿರೋಧಿಸಿ ಕರ್ನಾಟಕ ಸೇರಿ ದೇಶದಾದ್ಯಂತ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಬಿಜೆಪಿ ಕಿಡಿಕಾರಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ತನ್ನ ಕುಟುಂಬಕ್ಕೆ ನಿಷ್ಠರಾಗಿದ್ದವರನ್ನೂ ರಾಹುಲ್ ಗಾಂಧಿ ತೇಜೋವಧೆ ಮಾಡುತ್ತಿದ್ದಾರೆ. ಸತ್ತವರ ತಲೆಗೆ ಹಗರಣ ಕಟ್ಟುವ ಹುನ್ನಾರ ನಡೆಯುತ್ತಿದೆ. ನಾನು ಕೂಡಾ ರಾಹುಲ್ ಗಾಂಧಿ ಎಂದು ಬೊಬ್ಬಿರಿಯುವ ನಕಲಿ ವೀರರೇ ನಿಮಗಿದೋ ಎಚ್ಚರಿಕೆ. ಖರ್ಗೆ ಅವರೇ, ಅಪಾಯದ ತೂಗುಗತ್ತಿ ನಿಮ್ಮ ತಲೆ ಮೇಲಿದೆ. ಕೋತಿ ತಿಂದು ಮೇಕೆ ಮೂತಿಗೆ ಒರೆಸಿದ ಕತೆಯಂತೆ ನ್ಯಾಷನಲ್ ಹಗರಣ ಸಾಗುತ್ತಿದೆ. ಹಗರಣಕ್ಕೆ ವೋರಾ ಕಾರಣ ಎಂಬರ್ಥದಲ್ಲಿ ರಾಹುಲ್ ಗಾಂಧಿ ಹೇಳಿಕೆ ನೀಡಿರುವುದು ಪಲಾಯನವಾದ. ಗತಿಸಿ ಹೋದವರನ್ನು ಬಲಿಪಶು ಮಾಡುವ ಹುನ್ನಾರವೇ?  ಗಾಂಧಿ ಹೆಸರಿಟ್ಟುಕೊಂಡ ಮಾತ್ರಕ್ಕೆ ಅವರೆಲ್ಲಾ ಗಾಂಧಿಗಳೇ? ನಕಲಿ ಗಾಂಧಿಗಳನ್ನು ವಿಚಾರಿಸಬಾರದೇಕೆ? ಎಂದು ಪ್ರಶ್ನಿಸಿದೆ.