ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ

ಚಿಕ್ಕಬಳ್ಳಾಪುರ : ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಮಹಿಳೆಯರಿಗಾಗಿ ಶೀಘ್ರವೇ ವಿಶೇಷ ಕ್ಲಿನಿಕ್ ಆರಂಭಿಸುವ ಯೋಜನೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್‌ಎಯ ಜಡಬಂಡಹಳ್ಳಿ ಗ್ರಾಮದಲ್ಲಿ ಸ್ತ್ರೀಶಕ್ತಿ ಸಂಘಗಳ ಸದಸ್ಯರಿಗೆ ಸಾಲದ ಚೆಕ್ ವಿತರಿಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಮಹಿಳೆಯರಿಗಾಗಿ ವಿಶೇಷ ಕ್ಲಿನಿಕ್ ಆರಂಭಿಸುವ ಯೋಜನೆ ಇದ್ದು, ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.