ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಹೆಚ್‌.ಡಿ.ರೇವಣ್ಣ ಧರಣಿ..?

ಬೆಂಗಳೂರು: ಹೊಳೆನರಸೀಪುರದಲ್ಲಿ ಮೈಸೂರು ವಿಶ್ವವಿದ್ಯಾನಿಲಯದಿಂದ ಹೊಸದಾಗಿ MSc ಸೈಕಾಲಜಿ ಮತ್ತು MSc ಫುಡ್ & ನ್ಯೂಟ್ರಿಷನ್ ಸೇರಿದಂತೆ 12 ಸ್ನಾತಕೋತ್ತರ ಕೋರ್ಸ್‌ಗಳನ್ನು ಮಂಜೂರು ಮಾಡುವ ಬೇಡಿಕೆ ನಿರಾಕರಿಸಲಾಗಿದೆ. ಇದನ್ನು ಖಂಡಿಸಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಧರಣಿ ನಡೆಸುವುದಾಗಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ತಿಳಿಸಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ್ದ ರೇವಣ್ಣ, ಹೊಳೆನರಸೀಪುರ ಸರ್ಕಾರಿ ಮಹಿಳಾ ಗೃಹ ವಿಜ್ಞಾನ ಕಾಲೇಜಿಗೆ 2022-23ನೇ ಶೈಕ್ಷಣಿಕ ಸಾಲಿಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಹೊಸದಾಗಿ MSc ಸೈಕಾಲಜಿ ಮತ್ತು ಎಂಎಸ್ಸಿ ಫುಡ್ ಮತ್ತು ನ್ಯೂಟ್ರಿಷನ್ ಸೇರಿದಂತೆ 12 ಸ್ನಾತಕೋತ್ತರ ಕೋರ್ಸ್‌ಗಳನ್ನು ಮಂಜೂರು ಮಾಡಲು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಉನ್ನತ ಶಿಕ್ಷಣ ಇಲಾಖೆಗೆ ಶಿಫಾರಸು ಮಾಡಿದ್ದಾರೆ.