ಸರ್ಕಾರದ ವಿರುದ್ಧ ಗುಡುಗಿದ ಸಂಸದ!

ಲಾಕ್ ಡೌನ್, ಕರ್ಫ್ಯೂ ವಿಧಿಸುವುದಾದಾಗಿದ್ದರೆ ವ್ಯಾಕ್ಸಿನ್ ಯಾಕೆ ಬೇಕಿತ್ತು ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಸರಕಾರವನ್ನು ಪ್ರಶ್ನಿಸಿ ಬುಧವಾರ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ, ಅಲ್ಲಿ ಪ್ರಚಾರ ರ್ಯಾಲಿ ನಡೆಯುತ್ತದೆ ತಾನೇ? ಹೀಗಿರುವಾಗ ಕರ್ನಾಟಕದಲ್ಲಿ ಯಾಕೆ ಕರ್ಫ್ಯೂ, ಲಾಕ್ ಡೌನ್ ಅಂತಾ ಜನರನ್ನು ಮತ್ತೆ ಕಂಗಾಲು ಮಾಡುತ್ತಿದ್ದೀರಿ? ಜನರನ್ನು ಭೀತಿಯಲ್ಲಿ ಇಡುವುದನ್ನು ಮೊದಲು ಸರಕಾರ ನಿಲ್ಲಿಸಲಿ ಎಂದರು.ಕರ್ಫ್ಯೂ, ಲಾಕ್ ಡೌನ್ ನಿಂದ ಜನರಿಗೆ ಬಹಳ ತೊಂದರೆಯಾಗಿದೆ. ಜನರ ಜೀವನ, ಜೀವ ಎರಡು ಮುಖ್ಯ.ಜೀವ ಉಳಿಸಿ ಕೊಳ್ಳಲು ವ್ಯಾಕ್ಸಿನ್ ಕೊಟ್ಟಿದ್ದೇವೆ. ಈಗ ಜೀವನ ಉಳಿಯ ಬೇಕಾದರೆ ಕರ್ಫ್ಯೂ, ಲಾಕ್ ಡೌನ್ ತೆಗೆಯಿರಿ. ಸಿಎಂ ಈ ಬಗ್ಗೆ ಶುಕ್ರವಾರದ ಸಭೆಯಲ್ಲಿ ಒಳ್ಳೆಯ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಎಲ್ಲಾ ವರ್ಗದ ಜನರಿಗೂ ಕರ್ಫ್ಯೂ, ಲಾಕ್ ಡೌನ್ ನಿಂದ ತೊಂದರೆ ಆಗಿದೆ ಎಂದರು.
ಟ್ರೆಂಡಿಂಗ್ ಸುದ್ದಿ
- ವೀಕ್ಷಕರಿಗೆ ಧನ್ಯವಾದಗಳು – ಸಹಕಾರ ಹೀಗೆ ಇರಲಿ ಎಂದು ಬಯಸುವ ದಿ ನ್ಯೂಸ್24 ಕನ್ನಡ.
- ಸರ್ಕಾರಿ ಸವಲತ್ತುಗಳನ್ನು ಬಳಸಿಕೊಳ್ಳಲು ಜನರು ಹಿಂದೆಬಿದ್ದಿದ್ದಾರೆ
- ಮಾಜಿ ಸಿಎಂ ಎಸ್.ಎಂ.ಕೃಷ್ಣ ಸಹೋದರ ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ಎಂ.ಶಂಕರ್ ವಿಧಿವಶ
- ಡಾ.ಕೆ ಸುಧಾಕರ್ ಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನ..!
- ಆಪರೇಷನ್ ಕಮಲಕ್ಕೆ ಬಿಜೆಪಿ ವರಿಷ್ಠರಿಂದ ಗ್ರೀನ್ ಸಿಗ್ನಲ್..!
- ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಎಚ್.ವಿಶ್ವನಾಥ್..!
- ಮದುವೆಗೆ ಬಂದವರಿಗೆ ಉಚಿತ ಎಣ್ಣೆ ವ್ಯವಸ್ಥೆ..!
- ಜೀವನದಲ್ಲಿ ನಿಮ್ಮ ಹತ್ತಿರ ಕ್ಯಾನ್ಸರ್ ಖಾಯಿಲೆ ಬಾರದೆಂದರೆ ಹೀಗೆ ಮಾಡಿ..!
