ಮುಖ್ಯಮಂತ್ರಿಗಳ ಜತೆ ಪ್ರಧಾನಿ ಮೋದಿ ಮಹತ್ವದ ಸಭೆ ಆರಂಭ

ಬೆಂಗಳೂರು: ದೇಶಾದ್ಯಂತ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರೂಪಾತಂರಿ ವೈರಸ್ ಒಮಿಕ್ರಾನ್ ಅಟ್ಟಹಾಸವೂ ಆರಂಭವಾಗಿದೆ. ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಆರಂಭವಾಗಿದೆ.

ವರ್ಚುವಲ್ ಮೂಲಕ ಪ್ರಧಾನಿ ಮೋದಿ ಸಭೆ ನಡೆಸುತ್ತಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ. ವಿವಿಧ ರಾಜ್ಯಗಳಲ್ಲಿನ‌ ಕೋವಿಡ್ ಸ್ಥಿತಿಗತಿ, ಲಸಿಕಾಕರಣ, ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಧಾನಿ ಮಾಹಿತಿ ಪಡೆಯಲಿದ್ದಾರೆ.

ಕರ್ನಾಟಕದ ಕೋವಿಡ್, ಒಮಿಕ್ರಾನ್ ಸ್ಥಿತಿಗತಿ, ವೀಕೇಂಡ್ ಕರ್ಫ್ಯೂ, ವ್ಯಾಕ್ಸಿನೇಷನ್ ಅಭಿಯಾನ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಿಎಂ ಬೊಮ್ಮಾಯಿ ಪ್ರಧಾನಿ ಮೋದಿಯವರಿಗೆ ಮಾಹಿತಿ ನೀಡಲಿದ್ದಾರೆ.

ಪ್ರಧಾನಿ ಜತೆಗಿನ ಸಭೆ ಬಳಿಕ ಸಿಎಂ ಬೊಮ್ಮಾಯಿ ಕೋವಿಡ್ ತಾಂತ್ರಿಕಾ ಸಲಹಾ ಸಮಿತಿ ಸಭೆ ನಡೆಸಲಿದ್ದು, ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಇನ್ನಷ್ಟು ಕಠಿಣ ನಿಯಮ ಜಾರಿ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.