‘ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ’ ಮುಂದೂಡಿಕೆ

ರಾಮನಗರ: ಇಂದು ಮೇಕೆದಾಟು ಸಂಬಂಧ ಕಾಂಗ್ರೆಸ್ ( Congress ) ನಡೆಸುತ್ತಿರುವಂತ ಪಾದಯಾತ್ರೆಯು (Mekedatu Padayatra ) ರಾಮನಗರಕ್ಕೆ ಬಂದು ತಲುಪಿತ್ತು. ಸಿಎಂ ಮನವಿ, ಕಾಂಗ್ರೆಸ್ ಹೈಕಮಾಂಡ್ ಖಡಕ್ ಸೂಚನೆ, ಹೈಕೋರ್ಡ್ ಗರಂ ಸೇರಿದಂತೆ ವಿವಿಧ ಕಾರಣದಿಂದಾಗಿ ಕಾಂಗ್ರೆಸ್ ನಡೆಸುತ್ತಿರುವಂತ ಮೇಕೆದಾಟು ಪಾದಯಾತ್ರೆಯನ್ನು ನಿಲ್ಲಿಸೋ ನಿರ್ಧಾರವನ್ನು ಕಾಂಗ್ರೆಸ್ ಕೈಗೊಂಡಿದೆ.

ಇಂದು ರಾಮನಗರದ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ಸಭೆ ನಡೆಸಿದರು. ಈ ಸಭೆಯಲ್ಲಿ ಬೃಹತ್ ಮಟ್ಟದ ಜನರು ಸೇರದೇ ಮೂರು ನಾಲ್ಕು ಜನರು ಸೇರಿ ಪಾದಯಾತ್ರೆ ಮುಂದುವರೆಸೋ ಮಾತುಗಳನ್ನು ನಾಯಕರು ತಿಳಿಸಿದ್ದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಹೈಕಮಾಂಡ್ ಪಕ್ಷಕ್ಕೆ ಧಕ್ಕೆಯಾಗದಂತೆ ನಿರ್ಧಾರ ಕೈಗೊಳ್ಳುವಂತೆ ಸೂಚನೆ ನೀಡಿತ್ತು.

ಈ ಮಧ್ಯೆ ಕಾಂಗ್ರೆಸ್ ನ ಅನೇಕ ನಾಯಕರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಈ ಎಲ್ಲಾ ಕಾರಣದಿಂದಾಗಿ ಇಂದಿನ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಪಾದಯಾತ್ರೆಯನ್ನು ನಿಲ್ಲಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕೊರೋನಾ ಕಡಿಮೆ ಆದ ನಂತ್ರ, ಮುಂದಿನ ದಿನಗಳಲ್ಲಿ ಎಲ್ಲಿಗೆ ಪಾದಯಾತ್ರೆ ಮೊಟಕುಗೊಳಿಸಲಾಗಿತ್ತೋ ಅಲ್ಲಿಂದಲೇ ಪುನರಾರಂಭಿಸೋ ತೀರ್ಮಾನದೊಂದಿಗೆ, ಮೇಕೆದಾಟು ಪಾದಯಾತ್ರೆಯನ್ನು ನಿಲ್ಲಿಸೋ ನಿರ್ಧಾರವನ್ನು ಕಾಂಗ್ರೆಸ್ ನಾಯಕರು ಕೈಗೊಂಡಿದ್ದಾರೆ ಎನ್ನಲಾಗಿದೆ. ಕೆಲವೇ ಕ್ಷಣಗಳಲ್ಲಿ ಕಾಂಗ್ರೆಸ್ ನಾಯಕರು ಪತ್ರಿಕಾ ಘೋಷ್ಠಿಯಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.