ವಿಶ್ವ ಆರ್ಥಿಕ ವೇದಿಕೆ ಉದ್ದೇಶಿಸಿ ಇಂದು ಪ್ರಧಾನಿ ವಿಶೇಷ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ’ವಿಶ್ವದ ಸ್ಥಿತಿಗತಿ‘ಗಳ ಕುರಿತು ವರ್ಲ್ಡ್​ ಎಕಾನಮಿಕ್​ ಫೋರಂ ದಾವೋಸ್​ ಉದ್ದೇಶಿಸಿ ವಿಶೇಷ ಭಾಷಣ ಮಾಡಲಿದ್ದಾರೆ. ವಿಶ್ವ ಆರ್ಥಿಕ ವೇದಿಕೆ ದಾವೋಸ್​​​​​​​​​​​​​​​​ ಜನವರಿ 17 ರಿಂದ 21 ರವರಗೂ ವರ್ಚುಯಲ್​ ಮೂಲಕ ವಿಶೇಷ ಕಾರ್ಯಕ್ರಮ ಆಯೋಜಿಸಿದೆ.

ಈ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್​ ಮೂಲಕ ವಿಶೇಷ ಭಾಷಣ ಮಾಡಲಿದ್ದಾರೆ ಎಂದು ಪ್ರಧಾನಿ ಸಚಿವಾಲಯ ಮಾಹಿತಿ ನೀಡಿದೆ. ಈ ಕಾರ್ಯಕ್ರಮದಲ್ಲಿ ಚೀನಾ ಸೇರಿದಂತೆ ಹಲವಾರು ರಾಷ್ಟ್ರಗಳ ಮುಖ್ಯಸ್ಥರು ಹಲವು ರಾಷ್ಟ್ರಗಳ ಪ್ರಮುಖರು ಭಾಗವಹಿಸಲಿದ್ದಾರೆ.