ರಾಜ್ಯ ಸರ್ಕಾರ ಖಡಕ್ ಆದೇಶ!

ಆಸ್ಪತ್ರೆಗೆ ದಾಖಲಾಗಲು ರಾಜ್ಯ ಸರ್ಕಾರದಿಂದ ಗೈಡ್ ಲೈನ್ಸ್ ಬಿಡುಗಡೆ ಮಾಡಿದ್ದು, ಕಡ್ಡಾಯವಾಗಿ ಈ ನಿಯಮಗಳನ್ನು ಪಾಲನೆ ಮಾಡಲು ಸೂಚನೆ ನೀಡಲಾಗಿದೆ. ಹೌದು, ರಾಜ್ಯದಲ್ಲಿ ಕೊರೊನಾ ಮಹಾಸ್ಪೋಟವಾಗಿದ್ದು, ಪ್ರತಿನಿತ್ಯ 30,000 ಕ್ಕಿಂತ ಹೆಚ್ಚು ಮಂದಿಗೆ ಕೊರೊನಾ ಪಾಸಿಟಿವ್ ಧೃಡವಾಗಿದೆ. ಈ ಹಿನ್ನೆಲೆ ರಾಜ್ಯದ ಜನರಿಗೆ ಆಸ್ಪತ್ರೆಗೆ ದಾಖಲಾಗಲು ರಾಜ್ಯ ಸರ್ಕಾರದಿಂದ ಗೈಡ್ ಲೈನ್ಸ್ ಬಿಡುಗಡೆ ಮಾಡಿದ್ದು, ಕಡ್ಡಾಯವಾಗಿ ಈ ನಿಯಮಗಳನ್ನು ಪಾಲನೆ ಮಾಡಲು ಸೂಚನೆ ನೀಡಲಾಗಿದೆ.ತುರ್ತು ಆರೈಕೆ, ಚಿಕಿತ್ಸೆ ಅಗತ್ಯವಿದ್ದರಷ್ಟೆ ಆಸ್ಪತ್ರೆಗಳಿಗೆ ತೆರಳಬೇಕು. ಸೌಮ್ಯ ಲಕ್ಷಣಗಳಿದ್ದರೆ ಆಸ್ಪತ್ರೆಗಳಿಗೆ ಭೇಟಿ ನೀಡದಂತೆ ಸಲಹೆ ನೀಡಲಾಗಿದೆ. ಆಸ್ಪತ್ರೆಗಳಲ್ಲಿ ಜನದಟ್ಟಣೆ ತಪ್ಪಿಸಲು ರಾಜ್ಯ ಸರ್ಕಾರದಿಂದ ಆದೇಶ ನೀಡಲಾಗಿದ್ದು, ಮುಂದಿನ 2 ವಾರದವರೆಗೆ ಅನ್ವಯವಾಗುವಂತೆ ಸರ್ಕಾರ ಆದೇಶ ಹೊರಡಿಸಿದೆ.ಹಲ್ಲು ನೋವು, ತಲೆ ನೋವು ಇತ್ಯಾದಿ ಸಮಸ್ಯೆಗಳಿದ್ದರೆ ಬೇಡ. ಜನರು ಆಸ್ಪತ್ರೆಗೆ ಹೋಗದಂತೆ ರಾಜ್ಯ ಸರ್ಕಾರದಿಂದ ಮನವಿ ಮಾಡಿದೆ.