ಇಂದು ಕಾಂಗ್ರೆಸ್ ನಿಂದ ಮಹತ್ವದ ಸಭೆ

ರಾಮನಗರ : ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸುತ್ತಿದ್ದು, ರಾಜ್ಯ ಸರ್ಕಾರ ಪಾದಯಾತ್ರೆ ನಿರ್ಬಂಧಿಸಿ ಆದೇಶಿಸಿದೆ. ಈ ನಡುವೆ ಕಾಂಗ್ರೆಸ್ ಮಹತ್ವದ ಸಭೆ ನಡೆಸಲಿದ್ದು, ಸಬೆಯಲ್ಲಿ ಪಾದಯಾತ್ರೆ ಮುಂದುವರಿಸಬೇಕೋ? ನಿಲ್ಲಿಸಬೇಕೋ ಎಂಬುದು ನಿರ್ಧರಿಸಲಿದೆ.

ಇಂದು ಮಾಜಿ ಸಿಎಂ ಸಿದ್ದರಾಮಯ್ಯ,ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಭೆಯ ಬಳಿಕ ಪಾದಯಾತ್ರೆ ಬಗ್ಗೆ ಅಂತಿಮ ನಿರ್ಧಾರವಾಗಲಿದೆ ಎನ್ನಲಾಗಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಮೇಕೆದಾಟು ಪಾದಯಾತ್ರೆ ನಿಲ್ಲಿಸುವಂತೆ ನನಗೆ ಯಾವುದೇ ನೋಟಿಸ್ ಬಂದಿಲ್ಲ. ಇಂದು ಕಾಂಗ್ರೆಸ್ ಸಭೆ ನಡೆಸಲಿದ್ದು, ಸಭೆಯಲ್ಲಿ ಮೇಕೆದಾಟು ಪಾದಯಾತ್ರೆ ಮುಂದುವರಿಕೆ ಕುರಿತು ತೀರ್ಮಾನಿಸುತ್ತೇವೆ ಎಂದರು.