ನಾನೂ ಮುಖ್ಯಮಂತ್ರಿ ಸ್ಥಾನದ ಅಕಾಂಕ್ಷಿ: ಉಮೇಶ್ ಕತ್ತಿ

ಮಳವಳ್ಳಿ: ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ತಾನು ಕೂಡ ಮುಖ್ಯಮಂತ್ರಿ ಸ್ಥಾನದ ಅಕಾಂಕ್ಷಿ ಎಂದು ಅರಣ್ಯ ಮತ್ತು ಆಹಾರ ನಾಗರೀಕ ಪೂರೈಕೆ ಸಚಿವ ಉಮೇಶ್ ವಿ.ಕತ್ತಿ ತಿಳಿಸಿದರು.

ತಾಲ್ಲೂಕಿನ ಶಿವನಸಮುದ್ರದ ಗಗನಚುಕ್ಕಿ ಜಲಪಾತ ವೀಕ್ಷಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಕೇವಲ ಊಹಾಪೋಹವಾಗಿದೆ.

ಮುಖ್ಯಮಂತ್ರಿ ಬಸವರಾಜು ಬೊಮ್ಮಯಿ ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸಲಿದ್ದೇವೆಂದು ಹೇಳಿದರು.

ತಾನು ಕೂಡ 8 ಬಾರಿ ಶಾಸಕನಾಗಿ ಆಯ್ಕೆಯಾಗಿ, ಹಲವು ಖಾತೆಗಳ ಸಚಿವವಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಮುಖ್ಯಮಂತ್ರಿಯಾಗಿ ನಾಡಿನ ಜನರ ಸೇವೆ ಸಲ್ಲಿಸುವ ಹಂಬಲ ಹೊಂದಿದ್ದೇನೆಂದು ತಿಳಿಸಿದರು. ಯಡಿಯೂರಪ್ಪ ಬಿಜೆಪಿ ಹಿರಿಯ ನಾಯಕರಾಗಿದ್ದಾರೆ. ಅವರನ್ನು ಎಂದಿಗೂ ಕಡೆಗಣಿಸಿಲ್ಲ ಎಂದ ಅವರು, ಮೇಕೆದಾಟು ಯೋಜನೆ ಜಾರಿ ಮಾಡಲು ತಮಿಳುನಾಡು ಸರ್ಕಾರ ಅವಕಾಶ ಮಾಡಿಕೊಡಬೇಕು.

ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿರುವುದರಿಂದ ಮೇಕೆದಾಟು ಯೋಜನೆ ಜಾರಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದೆಂದು ಹೇಳಿದರು. ಇದೇ ಸಂದರ್ಭದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿ ಯು.ಪಿ ಸಿಂಗ್, ಉಪ ಸಂರಕ್ಷಣಾ ಅಧಿಕಾರಿಗಳಾದ ನಂದೀಶ್. ಏಳುಕುಂಡಲು, ಸಂತೋಷ್ ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ನಾಗೇಂದ್ರ ಪ್ರಸಾದ್, ವಲಯ ಅರಣ್ಯ ಅಧಿಕಾರಿ ಎನ್.ಸಿ ಮಹದೇವು, ಆಹಾರ ಇಲಾಖೆ ಉಪ ನಿರ್ದೇಶಕ ಕುಮಾರ್, ಯೋಗಾನಂದ್, ಕಾನೂನು ಮಾಪನ ಇಲಾಖೆ ಸಹಾಯಕ ನಿಯಂತ್ರಕ ಕೆ.ಎಂ. ಮಹದೇವ ಸ್ವಾಮಿ ಇತರರಿದ್ದರು