ಟೆಸ್ಟ್ ಸರಣಿಯಲ್ಲಿ ಭಾರತಕ್ಕೆ ಸೋಲು

ಟೀಮ್ ಇಂಡಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಏಳು ವಿಕೆಟ್‌ ಅಂತರದಿಂದ ಗೆಲುವು ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ದಕ್ಷಿಣ ಆಫ್ರಿಕಾ 2-1 ಅಂತರದಿಂದ ಗೆದ್ದುಕೊಂಡಿತು.

ಇಲ್ಲಿನ ನ್ಯೂಲ್ಯಾಂಡ್ಸ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ 212 ರನ್‌ಗಳ ಗುರಿ ಬೆನ್ನತ್ತಿದ ಎಲ್ಗರ್ ಪಡೆ 63.3 ಓವರ್‌ ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಗೆಲುವಿನ ನಗೆ ಬೀರಿತು.

ಕೀಗನ್ ಪೀಟರ್ಸನ್ 82, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಔಟಾಗದೆ 41, ತೆಂಬಾ ಬವುಮ ಔಟಾಗದೆ 32 ರನ್‌ ಗಳಿಸಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು.

 

ಭಾರತದ ಪರ ಜಸ್‌ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ಶಾರ್ದೂಲ್ ಠಾಕೂರ್ ತಲಾ ಒಂದು ವಿಕೆಟ್ ಪಡೆದರು.