ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ ಭರ್ಜರಿ ಜಯ

ಮುಂಬೈ: ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ 6 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ 14 ಅಂಕಗಳೊಂದಿಗೆ ಪಾಯಿಂಟ್ ಟೇಬಲ್ ನಲ್ಲಿ 3 ನೇ ಸ್ಥಾನಕ್ಕೇರಿದೆ.
ಮುಂಬೈನ ವಾಂಖಡೆ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ನೀಡಿದ 190 ರನ್ ಗುರಿ ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ ತಂಡದ ಪರ ಆರಂಭಿಕರಾದ ಯಶಸ್ವಿ ಜೈಸ್ವಾಲ್ 68 ರನ್ ಗಳಿಸಿದರೆ, ಜಾಸ್ ಬಟ್ಲರ್ 30 ರನ್ ಗಳಿಸಿ ಔಟಾದರು. ಬಳಿಕ ನಾಯಕ ಸಂಜು ಸ್ಯಾಮ್ಸನ್ 23 ರನ್ ಗಳಿಸಿ ಔಟಾದರು. ದೇವದತ್ತ ಪಡಿಕ್ಕಲ್ 31 ರನ್ ಗಳಿಸಿ ಔಟಾದರು. ಶಿಮ್ರಾನ್ ಹೆಟ್ಮೆಯರ್ ಸ್ಟೋಟಕ 31 ರನ್ ಗಳಿಸಿ ತಂಡವನ್ನು ಜಯದ ದಡ ಸೇರಿಸಿದರು. ಅಂತಿಮವಾಗಿ ರಾಜಸ್ಥಾನ್ ರಾಯಲ್ಸ್ ತಂಡ 19.4 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಿ ಜಯಭೇರಿ ಬಾರಿಸಿತು.
ಪಂಜಾಬ್ ಕಿಂಗ್ಸ್ ಪರ ಅರ್ಷದೀಪ್ ಸಿಂಗ್ 2 ವಿಕೆಟ್ ಪಡೆದರೆ, ರಬಾಡ 1 ಮತ್ತು ರಿಶಿ ಧವನ್ 1 ವಿಕೆಟ್ ಪಡೆದರು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿತು. ಪಂಜಾಬ್ ತಂಡದ ಪರ ಬೆರಿಸ್ಟೋ 56, ಜಿತಿನ್ ಶರ್ಮಾ 38, ಲಿವಿಂಗ್ ಸ್ಟೋನ್ 22, ರಾಜಪಕ್ಷ 27 ರನ್ ಗಳಿಸಿದರು.
ರಾಜಸ್ಥಾನ್ ರಾಯಲ್ಸ್ ಪರ ಯಜುವೇಂದ್ರ ಚಹಾಲ್ 3 ವಿಕೆಟ್ ಪಡೆದರೆ, ರವಿಚಂದ್ರನ್ ಅಶ್ವಿನ್ ಮತ್ತು ಪ್ರಸಿದ್ಧ ಕೃಷ್ಣ ತಲಾ 1 ವಿಕೆಟ್ ಪಡೆದರು.